ದೇಶವನ್ನು ಕೊರೊನಾ ಮುಕ್ತಗೊಳಿಸಬೇಕು: ಮಹೇಶ ಕಂಬಾರ

ಗೋಕಾಕ (ಬೆಳಗಾವಿ ಜಿಲ್ಲೆ): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಪ್ರಾಚಾರ್ಯ ಮಹೇಶ ಕಂಬಾರ ಶನಿವಾರ ಚಾಲನೆ ನೀಡಿದರು.
ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶವನ್ನು ಕೊರೊನಾ ಮುಕ್ತಗೊಳಿಸಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಲಸಿಕೆ ಪಡೆದುಕೊಂಡು ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು.
‘ಇಲ್ಲಿ 1,378 ವಿದ್ಯಾರ್ಥಿಗಳಿದ್ದಾರೆ. ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಲಸಿಕೆ ನೀಡಲಾಗುತ್ತಿದೆ. ಜುಲೈ 7ರವರೆಗೆ ಅಭಿಯಾನ ನಡೆಯಲಿದೆ’ ಎಂದು ತಿಳಿಸಿದರು.
ಉಪನ್ಯಾಸಕರಾದ ಪಿ.ಎ. ಲಕ್ಷೆಟ್ಟಿ, ಡಾ.ಸುನಂದಾ ಮಾದರ, ವಿ.ಐ. ತಿಳಗಂಜಿ, ವಿಜಯ ಹುಣಚ್ಯಾಳಿ, ಚಿದಾನಂದ ಶಿಂಗೆ, ಸಿಬ್ಬಂದಿ ಶರೀಫ ಮಾವುತ, ಬಸವರಾಜ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.