ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆಗೆ ಕ್ರಮ: ಕಾರಜೋಳ

Last Updated 13 ಮೇ 2021, 8:24 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಶೀಲ್ಡ್ ಲಸಿಕಾಕರಣ ಕಾರ್ಯಕ್ಕೆಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರ ಸಮ್ಮುಖದಲ್ಲಿ ಗುರುವಾರ ಚಾಲನೆ ನೀಡಲಾಯಿತು.

ಶ್ರೀನಗರ ರಸ್ತೆಯ ವಂಟಮುರಿ ನಗರ ಆರೋಗ್ಯ ಕೇಂದ್ರದಲ್ಲಿ ಸರ್ಕಾರದ ನಿರ್ದೇಶನದ ಪ್ರಕಾರ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕೆ ನೀಡಲಾಯಿತು.

ಈ ವೇಳೆ ಮಾತನಾಡಿದ ಕಾರಜೋಳ, ‘ಕೋವಿಡ್ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಸುರಕ್ಷತೆ ದೃಷ್ಟಿಯಿಂದ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಇದೇ ರೀತಿ ಮುಂಬರುವ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಸಂಸದೆ ಮಂಗಲಾ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಂ ಅಮಟೆ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT