ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ವ್ಯಕ್ತಿಗಳಿಗೆ ಲಸಿಕೆ: ಶಶಿಕಲಾ ಚಾಲನೆ

Last Updated 7 ಜೂನ್ 2021, 15:18 IST
ಅಕ್ಷರ ಗಾತ್ರ

ಬೆಳಗಾವಿ: ವಿಶೇಷ ವ್ಯಕ್ತಿಗಳು ಹಾಗೂ ಅವರ ಆರೈಕೆದಾರರಿಗೆ ಕೋವಿಡ್ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೋಮವಾರ ಚಾಲನೆ ನೀಡಿದರು.

ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

‘ಕೋವಿಡ್–19 ಸಂದರ್ಭದಲ್ಲಿ ವಿಶೇಷ ವ್ಯಕ್ತಿಗಳ ಆರೋಗ್ಯ ರಕ್ಷಣೆಗಾಗಿ ಲಸಿಕೆ ನೀಡಲು ನಾನು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸ್ಪಂದಿಸಿದ್ದಾರೆ. ರಾಜ್ಯದ ಎಲ್ಲ ಕಡೆಗಳಲ್ಲೂ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬೆಳಗಾವಿ ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅನಿಲ ಬೆನಕೆ, ಮಹೇಶ ಕುಮಠಳ್ಳಿ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ನಾಮದೇವ ಬಿಲಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT