ಸೋಮವಾರ, ಜನವರಿ 18, 2021
15 °C

ಬೆಳಗಾವಿ: ಕೋವಿಡ್ ಲಸಿಕೆಗಾಗಿ 12 ಕೇಂದ್ರ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಮೊದಲ ಹಂತದ ಕಾರ್ಯಕ್ಕೆ ಜ. 16ರಂದು ಚಾಲನೆ ದೊರೆಯಲಿದ್ದು, ವಿವಿಧ 12 ಕೇಂದ್ರಗಳನ್ನು ಜಿಲ್ಲಾಡಳಿತ ಬುಧವಾರ ಪ್ರಕಟಿಸಿದೆ.

ನಗರದ ಜಿಲ್ಲಾಸ್ಪತ್ರೆ, ವಂಟಮೂರಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಅಥಣಿ ಹಾಗೂ ಹುಕ್ಕೇರಿ ತಾಲ್ಲೂಕು ಆಸ್ಪತ್ರೆಗಳು, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ, ಖಾನಾಪುರ, ರಾಯಬಾಗ, ರಾಮದುರ್ಗ ಹಾಗೂ ಸವದತ್ತಿ ಸರ್ಕಾರಿ ಆಸ್ಪತ್ರೆಗಳು ಹಾಗೂ ಗೋಕಾಕ ತಾಲ್ಲೂಕಿನ ಕೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಭಿಯಾನ ನಡೆಯಲಿದೆ. ಪ್ರತಿ ಕೇಂದ್ರದಲ್ಲೂ ದಿನಕ್ಕೆ 100 ಮಂದಿಗೆ ಲಸಿಕೆ ನೀಡಲಾಗುವುದು. ಮೊದಲ ಹಂತದಲ್ಲಿ ಆರೋಗ್ಯ ಸೇವಾ ಸಿಬ್ಬಂದಿಯನ್ನು ಪರಿಗಣಿಸಲಾಗುತ್ತಿದೆ. ಅವರಿಗೆ ಕೇಂದ್ರದಿಂದ ಪೂರೈಕೆಯಾಗಿರುವ ‘ಕೋವಿಶೀಲ್ಡ್’ ಲಸಿಕೆ ಕೊಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು