ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ: ಸದ್ಯಕ್ಕೆ 2ನೇ ಡೋಸ್ ಮಾತ್ರ

Last Updated 7 ಮೇ 2021, 13:25 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಲಸಿಕೆಯನ್ನು 2ನೇ ಡೋಸ್ ಪಡೆಯುವವರಿಗೆ ಮಾತ್ರ ನೀಡಲಾಗುವುದು’ ಎಂದು ಜಿಲ್ಲಾ ಲಸಿಕಾ ಅಧಿಕಾರಿ ಡಾ.ಈಶ್ವರ ಗಡಾದ ಮತ್ತು ಡಿಎಚ್‌ಒ ಡಾ.ಶಶಿಕಾಂತ ವಿ. ಮುನ್ಯಾಳ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಲಸಿಕ ಅಭಿಯಾನವು ಪ್ರಗತಿಯಲ್ಲಿದೆ. ಗುರುವಾರದವರೆಗೆ ಜಿಲ್ಲೆಯಲ್ಲಿ 6,24,485 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಲಾಗುತ್ಯಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು 2ನೇ ಡೋಜ್ ಅನ್ನು ಮೊದಲ ಡೋಸ್‌ ಪಡೆದ 42 ದಿನಗಳ ನಂತರ ತೆಗೆದುಕೊಳ್ಳಬೇಕು. ಕೋವ್ಯಾಕ್ಸಿನ್ ಅನ್ನು 28 ದಿನಗಳ ನಂತರ (2ನೇ ಡೋಸ್) ಹಾಕಿಸಿಕೊಳ್ಳಬೇಕು’ ಎಂದು ಮಾಹಿತಿ ನೀಡಿದ್ದಾರೆ.

‘ಮೊದಲ ಡೋಸ್ ಲಸಿಕೆ ಪಡೆಯುವ ಅರ್ಹ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುವುದು. ದಿನಾಂಕವನ್ನು ಮುಂಚಿತವಾಗಿ ತಿಳಿಸಲಾಗುವುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT