ಭಾನುವಾರ, ಆಗಸ್ಟ್ 1, 2021
26 °C

ಬೆಳಗಾವಿ: ಕೋವಿಡ್‌: ಮತ್ತೆರಡು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್‌–19ನಿಂದಾಗಿ ಜಿಲ್ಲೆಯಲ್ಲಿ ಮತ್ತೆ ಎರಡು ಸಾವು ಸಂಭವಿಸಿದ್ದು, ಇದರೊಂದಿಗೆ ಇದುವರೆಗೆ ಒಟ್ಟು 9 ಜನ ಸಾವನ್ನಪ್ಪಿದ್ದಾರೆ. ಯುವವೈದ್ಯಯೊಬ್ಬರು ಸೇರಿದಂತೆ 15 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 459ಕ್ಕೆ ತಲುಪಿದೆ.

ಬೆಳಗಾವಿಯ ಹಿಂದವಾಡಿಯಲ್ಲಿ ಇಬ್ಬರು, ಸದಾಶಿವನಗರ, ಖಾಸಭಾಗ, ಎಲಿಬೈಲ್‌, ಬಸವನಕುಡಚಿ, ರಾಮದುರ್ಗ ಹಾಗೂ ಹುಕ್ಕೇರಿ ತಾಲ್ಲೂಕಿನಲ್ಲಿ ತಲಾ ಒಬ್ಬರು, ಬೈಲಹೊಂಗಲ ತಾಲ್ಲೂಕಿನಲ್ಲಿ ಹಾಗೂ ಅಥಣಿ ತಾಲ್ಲೂಕಿನಲ್ಲಿ ತಲಾ ಇಬ್ಬರು, ಚಿಕ್ಕೋಡಿ ತಾಲ್ಲೂಕಿನಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ.

ಒಂದು ವರ್ಷದ ಹೆಣ್ಣು ಮಗು ಸೇರಿದಂತೆ ಅಂತರ್‌ಜಿಲ್ಲಾ ಪ್ರಯಾಣ ಮಾಡಿದ್ದ ಮೂವರಲ್ಲಿ ಹಾಗೂ ಅಂತರರಾಷ್ಟ್ರೀಯ ಪ್ರಯಾಣ ಮಾಡಿದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದ 11 ಜನರ ಸೋಂಕಿನ ಕಾರಣ ಪತ್ತೆಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು