ಬುಧವಾರ, ಮೇ 27, 2020
27 °C

ಬೆಳಗಾವಿ: ಸಂಪೂರ್ಣ ಬಂದ್ ಆಡಿಯೊ ತುಣುಕು ನಕಲಿ; ಜಿಲ್ಲಾಧಿಕಾರಿ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾರುಕಟ್ಟೆಯಲ್ಲಿ ಈರುಳ್ಳಿ ಖರೀದಿಸುತ್ತಿರುವ ಮಹಿಳೆಯರು– ಸಂಗ್ರಹ ಚಿತ್ರ

ಬೆಳಗಾವಿ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಶನಿವಾರದಿಂದ ಸೋಮವಾರದವರೆಗೆ ದಿನಸಿ, ತರಕಾರಿ ಮಾರಾಟ ಸೇರಿದಂತೆ ಎಲ್ಲವೂ ಸಂಪೂರ್ಣ ಬಂದ್ ಎಂಬ ಆಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಕಲಿಯಾಗಿದ್ದು, ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವ ಪ್ರತಿಯೊಂದು ಕ್ರಮಗಳ ಕುರಿತು ಲಿಖಿತ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಇಂತಹ ಅನಧಿಕೃತ ಮತ್ತು ಸುಳ್ಳು ಸುದ್ದಿಗಳನ್ನು ನಂಬಿ ಆತಂಕಕ್ಕೆ ಒಳಗಾಗಬಾರದು. ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಲಿಖಿತವಾಗಿ ಪ್ರಕಟಿಸುವ ನಿರ್ದೇಶನ ಅಥಾವ ಆದೇಶಗಳನ್ನು ಮಾತ್ರ ಪಾಲಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು