ಗುರುವಾರ , ಮೇ 26, 2022
29 °C

ಅಪರಾಧ ತಡೆಗೆ ಎಲ್ಲರ ಸಹಕಾರ ಅಗತ್ಯ: ಎಸ್ಪಿ ಲಕ್ಷ್ಮಣ ನಿಂಬರಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಅಪರಾಧ ಚಟುವಟಿಕೆಗಳನ್ನು ತಡೆಯಲು ಸಮಾಜದ ಎಲ್ಲರ ಸಹಕಾರ ಅಗತ್ಯ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ಅಪರಾಧ ತಡೆ ಮಾಸಾಚರಣೆ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸರು, ವೈದ್ಯರು, ನಗರಪಾಲಿಕೆ ಅಧಿಕಾರಿ–ಸಿಬ್ಬಂದಿ, ಪತ್ರಕರ್ತರು ಹಾಗೂ ವಿವಿಧ ಇಲಾಖೆ ಅಧಿಕಾರಿ–ಸಿಬ್ಬಂದಿಗೆ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಪೊಲೀಸ್ ಇಲಾಖೆಯಿಂದ ಮಾತ್ರವೇ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುವುದಿಲ್ಲ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸಹಕಾರ ಕೊಡಬೇಕಾಗುತ್ತದೆ. ಹೀಗಾಗಿ, ಜಾಗೃತಿ ಮೂಡಿಸುವ ಚಟುವಟಿಕೆಯ ಭಾಗವಾಗಿ ಕ್ರಿಕೆಟ್ ಟೂರ್ನಿ ನಡೆಸಲಾಗುತ್ತಿದೆ’ ಎಂದರು.

‘ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ’ ಎಂದು ಹೇಳಿದರು.

‘ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ’ ಎಂದರು.

ಎಎಸ್ಪಿ ಅಮರನಾಥ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಪತ್ರಕರ್ತ ದಿಲೀಪ್ ಕುರಂದವಾಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು