ಚನ್ನಮ್ಮನ ಕಿತ್ತೂರು (ಬೆಳಗಾವಿ): ತಾಲ್ಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಯುವಕನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ವಿಜಯ ರಾಮಚಂದ್ರ ಆರೇರ್ (32) ಕೊಲೆಯಾದ ಯುವಕ.
ಹಳೆಯ ದ್ವೇಷವೇ ಕೊಲೆಗೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಅದೇ ಗ್ರಾಮದ ಕಲ್ಲಪ್ಪ ಸೆದೆಪ್ಪ ಕ್ಯಾತನವರ (48)ಸೇರಿ ಹತ್ತು ಮಂದಿ ಮೇಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ರಾತ್ರಿ ಯುವಕನೊಂದಿಗೆ ಜಗಳ ತೆಗೆದ ಗುಂಪು ಮಚ್ಚಿನಿಂದ ಹಲ್ಲೆ ಮಾಡಿತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.