ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಚಾಲಕನಿಗೆ ಜೀವ ಬೆದರಿಕೆ: ಆರೋಪಿ ಬಂಧನ

Published 21 ಮಾರ್ಚ್ 2024, 15:54 IST
Last Updated 21 ಮಾರ್ಚ್ 2024, 15:54 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ನೆಹರೂ ನಗರದ ಆರ್‌.ಎನ್‌.ಶೆಟ್ಟಿ ಕಾಲೇಜು ಕ್ರಾಸ್‌ನಲ್ಲಿ ಗುರುವಾರ ಸಾರಿಗೆ ಸಂಸ್ಥೆಯ ಬಸ್‌ ಚಾಲಕನಿಗೆ ಏರ್‌ಗನ್‌ ತೋರಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಝಮ್‌ ನಗರದ ಮಹಮ್ಮದ್‌ಷರೀಫ್‌ ಬಾದ್‌ಶಾಹ್‌ ಮುಲ್ಲಾ ಬಂಧಿತ ಆರೋಪಿ.

‘ಕಾರು ಚಾಲಕ ಮಹಮ್ಮದ್‌ಷರೀಫ್‌ ರಸ್ತೆಯಲ್ಲಿ ಅಡ್ಡಬಂದು, ವಾಹನ ಚಾಲನೆಗೆ ಸಂಬಂಧಿಸಿದಂತೆ ವಾಗ್ವಾದ ಮಾಡಿದರು. ಶರ್ಟ್‌ ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಏರ್‌ಗನ್‌ ಹಿಡಿದು ಜೀವ ಬೆದರಿಕೆ ಹಾಕಿದರು ಎಂದು ಬಸ್‌ನ ಚಾಲಕ ಮಲ್ಲಿಕಾರ್ಜುನ ಅಂಕಲಿ ದೂರು ನೀಡಿದ್ದರು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದೇವೆ. ಏರ್‌ಗನ್‌, ಕಾರು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದೇವೆ’ ಎಂದು ಮಾಳಮಾರುತಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT