ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಲಿಂಡರ್‌ ಸ್ಫೋಟ: ಗಾಯಗೊಂಡಿದ್ದ ದಂಪತಿ ಸಾವು

Published 25 ಮೇ 2024, 14:10 IST
Last Updated 25 ಮೇ 2024, 14:10 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಸುಳಗಾ(ಎಚ್‌) ಗ್ರಾಮದಲ್ಲಿ ಆಕಸ್ಮಿಕವಾಗಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.

ಕಲ್ಲಪ್ಪ ಪಾಟೀಲ (65), ಸುಮನ್‌ ಪಾಟೀಲ(61) ಮೃತರು.

ಮೇ 18ರಂದು ನಸುಕಿನ ಜಾವ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟವಾಗಿತ್ತು. ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟದ ತೀವ್ರತೆಯಿಂದ ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT