ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೈಕ್‌ ಡಿಕ್ಕಿ: ಸವಾರ ಸಾವು

Published 12 ಜೂನ್ 2024, 6:47 IST
Last Updated 12 ಜೂನ್ 2024, 6:47 IST
ಅಕ್ಷರ ಗಾತ್ರ

ಹಂದಿಗುಂದ: ಸಮೀಪದ ಪಾಲಬಾವಿಯಲ್ಲಿ ಸೋಮವಾರ ರಾತ್ರಿ ಬೈಕುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಒಬ್ಬ ಮೃತಪಟ್ಟಿದ್ದಾನೆ.

ಸುಲ್ತಾನಪುರ ಗ್ರಾಮದ ರಾಘವೇಂದ್ರ ರಾಮಪ್ಪ ಹಾದಿಮನಿ (28) ಮೃತ ವ್ಯಕ್ತಿ. ಹಾರೂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪಾಲಬಾವಿ ಗ್ರಾಮದಲ್ಲಿ ಸೋಮವಾರ ರಾತ್ರಿ 8 ಗಂಟೆಗೆ ಅಪಘಾತ ನಡೆದಿದೆ. ಹಿಂಬದಿಯ ಸವಾರ ಸೌರಭ ತುಕಾರಾಮ ಮಾದರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾರೂಗೇರಿ ಸಿಪಿಐ ರವಿಚಂದ್ರನ ಬಡಪಕೀರಪ್ಪನವರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಯವರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT