ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗೋವು ಸಾಗಣೆ ಆರೋಪ: ಲಾರಿ ಚಾಲಕನಿಗೆ ಥಳಿತ

Published 21 ಏಪ್ರಿಲ್ 2024, 17:53 IST
Last Updated 21 ಏಪ್ರಿಲ್ 2024, 17:53 IST
ಅಕ್ಷರ ಗಾತ್ರ

ಬೆಳಗಾವಿ: ‘ಲಾರಿಯೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ’ ಎಂದು ಆರೋಪಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಭಾನುವಾರ ರಾತ್ರಿ  ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು, ಚಾಲಕನನ್ನು ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯ ವಿಡಿಯೊಗಳು ಸಾಮಾಜಿಕ‌‌ ಜಾಲತಾಣಗಳಲ್ಲಿ ಹರಿದಾಡಿವೆ‌.

ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಮಾರ್ಗಮಧ್ಯೆ ತಡೆದ ಕಾರ್ಯಕರ್ತರು, ಲಾರಿಯ ಗಾಜುಗಳನ್ನು ಒಡೆದು ಚಾಲಕನ ಮೇಲೆ ಹಲ್ಲೆ ಮಾಡಿದರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಅಪಾರ ಸಂಖ್ಯೆಯಲ್ಲಿ ಜನರು ಸೇರಿದರು. ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್, ‘ಪೊಲೀಸರು ಈ ಬಗ್ಗೆ ಪರಿಶೀಲಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ತನಿಖೆ ನಡೆಸುತ್ತಿದ್ದೇವೆ: ‘ಲಾರಿ ತಡೆದ ಯುವಕರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅದರಲ್ಲಿ 10ರಿಂದ 15 ಆಕಳು ಇದ್ದವು ಎಂದು ಗೊತ್ತಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ’ ಎಂದು ನಗರ ಪೊಲೀಸ್‌ ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ ವಿಭಾಗ) ರೋಹನ ಜಗದೀಶ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT