ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಸಚಿವೆ ಹೆಬ್ಬಾಳಕರ ಸೇರಿ 100 ಜನರ ವಿರುದ್ಧ ದೂರು

Published 14 ಏಪ್ರಿಲ್ 2024, 16:31 IST
Last Updated 14 ಏಪ್ರಿಲ್ 2024, 16:31 IST
ಅಕ್ಷರ ಗಾತ್ರ

ಬೆಳಗಾವಿ: ‘ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪ್ರಚೋದನೆಯಿಂದ 100ಕ್ಕೂ ಹೆಚ್ಚು ಮಂದಿ ಆದರ್ಶ ನಗರದ ಒಂದನೇ ಅಡ್ಡ ರಸ್ತೆಯಲ್ಲಿರುವ ನನ್ನ ಮನೆಗೆ ಮುತ್ತಿಗೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಮುಖಂಡ ಸಂಜಯ ಪಾಟೀಲ ಶಹಾಪುರ ಪೊಲೀಸ್‌ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ.

‘ಲಕ್ಷ್ಮಿ ಹೆಬ್ಬಾಳಕರ ಪ್ರಚೋದನೆ ನೀಡಿದ್ದರಿಂದ ಆಯೇಷಾ ಸನದಿ, ಸಂಜಯ ಜಾಧವ, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರ್ಡಿ, ಮುಸ್ತಾಕ್‌ ಮುಲ್ಲಾ, ಸದ್ದಾಮ್‌ ವೈಭವ ನಗರ, ರೋಹಿಣಿ ಬಾಬ್ಟೆ, ಶಂಕರಗೌಡ ಪಾಟೀಲ, ಸಂಗನಗೌಡ ಪಾಟೀಲ, ಭಾರತಿ ಬುಡವಿ ಮತ್ತು ಇತರೆ 100 ಜನರು ಏಪ್ರಿಲ್‌ 13ರಂದು ನನ್ನ ಮನೆಗೆ ಮುತ್ತಿಗೆ ಹಾಕಿದ್ದಾರೆ. ಮಾರಕಾಸ್ತ್ರಗಳಿಂದ ಮನೆಯಲ್ಲಿನ ಬೆಲೆಬಾಳುವ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಜೀವ ಬೆದರಿಕೆ ಒಡ್ಡಿದ್ದಾರೆ. ಇವರೆಲ್ಲರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT