ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಅಕ್ರಮ ಮಾರಾಟ: ಮೂವರ ಬಂಧನ

Published 6 ಏಪ್ರಿಲ್ 2024, 5:33 IST
Last Updated 6 ಏಪ್ರಿಲ್ 2024, 5:33 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕಿನ ಹೊಸ ವಂಟಮುರಿಯಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಕಾಡಪ್ಪ ಬಸಪ್ಪ ವಾಲಿಕಾರ ಅವರನ್ನು ಕಾಕತಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅವರಿಂದ ₹6,714 ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ತಾಲ್ಲೂಕಿನ ವಿರಪನಕೊಪ್ಪದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ವಿಠ್ಠಲ ವಡ್ಡಿನ ಎಂಬುವವರನ್ನು ಹಿರೇಬಾಗೇವಾಡಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮದ್ಯದ ಸ್ಯಾಚೆಟ್‌ಗಳು ಮತ್ತು ₹400 ನಗದು ವಶಪಡಿಸಿಕೊಳ್ಳಲಾಗಿದೆ.

ತಾಲ್ಲೂಕಿನ ಮುಚ್ಚಂಡಿ–ಬುಡ್ರ್ಯಾನೂರ ಕ್ರಾಸ್‌ ಹತ್ತಿರ ಅಕ್ರಮವಾಗಿ ಕಳ್ಳಬಟ್ಟಿ ಮಾರಾಟ ಮಾಡುತ್ತಿದ್ದ ರವಿ ಗುಡದಯ್ಯಗೋಳ (52) ಎಂಬುವವರನ್ನು ಮಾರಿಹಾಳ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅವರಿಂದ ₹10 ಸಾವಿರ ಮೌಲ್ಯದ ಸಾರಾಯಿ ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT