ಶನಿವಾರ, ಜೂನ್ 19, 2021
27 °C

ಬೆಳಗಾವಿ: ವಿಮೆ: ವೈಯಕ್ತಿಕವಾಗಿ ನಿರ್ಧರಿಸಲು ಅವಕಾಶ- ಶಿವನಗೌಡ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಪೋಟ ಮತ್ತು ಗುಡುಗು-ಮಿಂಚಿನಿಂದಾಗಿ ಉಂಟಾಗುವ ನಷ್ಟದ ನಿರ್ಧಾರವನ್ನು ವೈಯಕ್ತಿಕವಾಗಿ ಮಾಡಿ ಬೆಳೆ ವಿಮಾ ನಷ್ಟ ಪರಿಹಾರ ಇತ್ಯರ್ಥಪಡಿಸಲು ‌ಅವಕಾಶ ಒದಗಿಸಲಾಗಿದೆ. ನೋಂದಾಯಿತ ರೈತರು ಪ್ರಯೋಜನ ಪಡೆಯಬಹುದಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

‘ಬೆಳೆ ನಷ್ಟ ಸಂಭವಿಸಿದರೆ, ಬೆಳೆ ವಿಮೆ ನೋಂದಣಿ ಮಾಡಿಸಿರುವ ರೈತರು ಈ ಬಗ್ಗೆ ನೇರವಾಗಿ ಯುನಿವರ್ಸಲ್ ಸೊಂಪೊ ಜನರಲ್ ಇನ್ಸೂರನ್ಸ್ ಕಂಪನಿಯ ತಾಲ್ಲೂಕುವಾರು ಪ್ರತಿನಿಧಿಗಳು ಅಥವಾ ಕೃಷಿ ಇಲಾಖೆ ಅಧಿಕಾರಿಗಳನ್ನು ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಕಾರಣಗಳೊಂದಿಗೆ 72‌‌ ಗಂಟೆ ಒಳಗೆ ಸಂಪರ್ಕಿಸಬೇಕು’ ಎಂದು ಮಾಹಿತಿ ನೀಡಿದ್ದಾರೆ.

‘ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರತಿನಿಧಿ ಶರೀಫ್ (ಮೊ: 9152007672) ಅಥವಾ ರಾಜ್ಯ ಪ್ರತಿನಿಧಿ ಕಚೇರಿ ಮೊ: (9740594807), ಸ್ಥಳೀಯ ಬ್ಯಾಂಕ್‌ಗಳು, ಸಹಕಾರಿ ಸಂಘಗಳು, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.