ಬೆಳಗಾವಿ: ‘ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗೆ ಸಮರ್ಪಕ ಪರಿಹಾರವನ್ನು ತ್ವರಿತವಾಗಿ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಕೃಷಿ ಮತ್ತು ತೋಟಗಾರಿಕೆ ಕೆಲಸಕ್ಕೂ ವಿಸ್ತರಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ತಾಲ್ಲೂಕಿನ ಸುವರ್ಣ ವಿಧಾನಸೌಧದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

‘ಬೆಳೆ ನಷ್ಟ ಪರಿಹಾರವನ್ನು ರೈತರ ಖಾತೆಗೆ ಕಾಲಮಿತಿಯೊಳಗೆ ಜಮಾ ಮಾಡಬೇಕು. ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ರದ್ದುಗೊಳಿಸಬೇಕು. ಪ್ರತಿ ವರ್ಷ ನೆರೆಪೀಡಿತವಾಗುವ ಪ್ರದೇಶಗಳ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಮಳೆ ನೀರನ್ನು ಬಳಸಿಕೊಳ್ಳಲು ಸಮಗ್ರ ನೀರಾವರಿ ಯೋಜನೆ ಕೈಗೊಳ್ಳಬೇಕು. ಕರ್ನಾಟಕ ಕೃಷಿ ಬೆಲೆ ಆಯೋಗದ ಬೆಲೆಸೂಚಿಯನ್ನು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಓದಿ:ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸೇರಿ 15 ಕಾಂಗ್ರೆಸ್ ಸದಸ್ಯರ ಅಮಾನತು

‘ಬಗರ್ಹುಕುಂ ಸಾಗುವಳಿ ಮಾಡಿರುವ ರೈತರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳ ಸಮರ್ಪಕ ನಿರ್ವಹಣೆಗಾಗಿ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹನಿ ನೀರಾವರಿ ಸಹಾಯಧನವನ್ನು ಆರು ವರ್ಷಗಳಿಗೊಮ್ಮೆ ಪ್ರತಿ ರೈತರಿಗೂ ಪುನರಾವರ್ತಿಸಬೇಕು’ ಎಂದು ಒತ್ತಾಯಿಸಿದರು.

‘ಟನ್ ಕಬ್ಬಿಗೆ ಇಲಾಖೆ ₹4,200 ನಿಗದಿಪಡಿಸಿ ಕಬ್ಬಿನ ಎಲ್ಲಾ ಉಪಉತ್ಪನ್ನಗಳ ಆದಾಯದಲ್ಲಿ ರೈತರಿಗೂ ಪಾಲು ಸಿಗುವಂತೆ ಮಾಡಬೇಕು. ಕೃಷ್ಣಾ, ಶಿವಸಾಗರ, ಮಲಪ್ರಭಾ ಮತ್ತು ರನ್ನ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಬಗ್ಗೆ ವಿಶೇಷ ಚರ್ಚೆಯೊಂದಿಗೆ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು. ‘ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದು ತಿಳಿಸಿದರು.

‘ತೋಟಗಳಲ್ಲಿ ವಾಸವಾಗಿರುವ ರೈತರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಎಲ್ಲ ರೀತಿಯ ಸರ್ಕಾರಿ ಕರ, ವಿದ್ಯುತ್ ಬಿಲ್ ಮನ್ನಾ ಆಗಬೇಕು. ರೈತರ ಅನುಮತಿ ಇಲ್ಲದೆ ಜಮೀನನ್ನು ಸಾರ್ವಜನಿಕ ಬಳಕೆಯ ನೆಪದಲ್ಲಿ ಕಿತ್ತುಕೊಳ್ಳಬಾರದು. ಬಿ.ಟಿ. ಬೀಜಗಳ ತಂತ್ರಜ್ಞಾನವನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಸಾವಯವ ಮತ್ತು ಸಿರಿ ಧಾನ್ಯಗಳ ಕೃಷಿ ಉತ್ತೇಜಿಸಬೇಕು. ಪಡಿತರ ವ್ಯವಸ್ಥೆ ಸರಿಪಡಿಸಬೇಕು’ ಎಂದು ಆಗ್ರಹಿಸಿದರು.

ನೋಡಿ:ವಿಡಿಯೊ | ನಮ್ಮತ್ರ ಏನೂ ಉಳಿದಿಲ್ಲ: ಎಚ್ಡಿ ರೇವಣ್ಣ

ಮುಖಂಡರಾದ ಪಚ್ಚೆ ನಂಜುಂಡಸ್ವಾಮಿ, ಚೂನಪ್ಪ ಪೂಜೇರಿ, ರಾಮಣ್ಣ ಕೆಂಚನಹಳ್ಳಿ, ಶಶಿಕಾಂತ ಪಡಸಲಗಿ, ಸುರೇಶಬಾಬು ಪಾಟೀಲ, ಜಯಶ್ರೀ ಗುರವನ್ನವರ, ಗಂಗಾಧರ ಮೇಟಿ, ಸಿದ್ದವೀರಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.