ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆಗಾಗಿ ಸರ್ಕಾರ ಆ್ಯಪ್ ಬಿಡುಗಡೆ ಮಾಡಿದ್ದು, ಆರಂಭದಲ್ಲೇ ಸಮೀಕ್ಷೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜ.1ರಿಂದ 6ರವರೆಗೆ (ಆರೇ ದಿನಗಳಲ್ಲಿ) 1.86 ಲಕ್ಷ (ಶೇ 14) ರೈತರು ಸಮೀಕ್ಷೆ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ 2024–25ನೇ ಸಾಲಿನಲ್ಲಿ ಹಿಂಗಾರು ಹಂಗಾಮಿನಲ್ಲಿ 13.30 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸುವಂತೆ ಸರ್ಕಾರ ಗುರಿ ನೀಡಿತ್ತು. ಈ ಪೈಕಿ 13.15 ಲಕ್ಷ ತಾಕುಗಳಲ್ಲಿ ಸಮೀಕ್ಷೆ ಮಾಡಲಾಗಿತ್ತು. ಶೇ 98.82 ಗುರಿ ಸಾಧನೆಯಾಗಿತ್ತು.

2025–26ನೇ ಸಾಲಿನಲ್ಲಿ ಹಿಂಗಾರು ಹಂಗಾಮಿನಲ್ಲಿ 4.24 ಲಕ್ಷ ಹೆಕ್ಟೇರ್ನಲ್ಲಿ ರೈತರು ವಿವಿಧ ಬೆಳೆ ಬೆಳೆದಿದ್ದಾರೆ. 13.69 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆಗೆ ಗುರಿ ನಿಗದಿಪಡಿಸಲಾಗಿದೆ. ಜ.31ರವರೆಗೆ ಸಮೀಕ್ಷೆಗೆ ಅವಕಾಶವಿದೆ.

ರೈತರೇ ಮಾಡಬಹುದು: ‘ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಆ್ಯಪ್ನಲ್ಲಿ ಛಾಯಾಚಿತ್ರ ಸಹಿತವಾಗಿ ಅಪ್ಲೋಡ್ ಮಾಡುವ ಉದ್ದೇಶದಿಂದ ಸಮೀಕ್ಷೆ ಆರಂಭಿಸಿದ್ದೇವೆ. ರೈತರಿಗೆ ನೇರವಾಗಿ ಮಾಹಿತಿ ಅಪ್ಲೋಡ್ ಮಾಡಲು ಸಾಧ್ಯವಾಗದಿದ್ದರೆ, ಖಾಸಗಿ ನಿವಾಸಿಗಳೂ(ಪಿಆರ್) ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಿದ್ದೇವೆ. ಈ ಬಗ್ಗೆ ಹಳ್ಳಿ–ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ’ ಎಂದು ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಯಾವುದೇ ರೈತರು ತಪ್ಪದೇ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಇಲಾಖೆಗೆ ನಿಖರವಾದ ದತ್ತಾಂಶ ದೊರೆಯುತ್ತದೆ. ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲ. ಜತೆಗೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿ ಆಯ್ಕೆ, ಬೆಳೆ ವಿಮೆ ಯೋಜನೆಯಡಿ ತಾಕುವಾರು ಬೆಳೆ ಪರಿಶೀಲನೆ ಮತ್ತು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನಿಂದ ಬೆಳೆಹಾನಿ ಪರಿಶೀಲನೆಗೆ ಸಹಾಯವಾಗುತ್ತದೆ’ ಎಂದರು.