ಶನಿವಾರ, ಆಗಸ್ಟ್ 13, 2022
26 °C

ಬೆಳಗಾವಿಯಲ್ಲಿ ಕ್ರೂಸರ್ ವಾಹನ ಪಲ್ಟಿ: ಮೃತರ ಕುಟುಂಬದವರಿಗೆ ತಲಾ ₹ 7 ಲಕ್ಷ ಪರಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಕಳ್ಯಾಳ್ ಬಳಿ ಅಪಘಾತದಲ್ಲಿ ಮೃತಪಟ್ಟ ಏಳೂ ಜನರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಸರ್ಕಾರದಿಂದ ನೀಡಲಾಗುವುದು. ಅಲ್ಲದೇ, ಜಿಲ್ಲಾಡಳಿತದಿಂದ ಕೂಡ ತಲಾ ₹ 2 ಲಕ್ಷ ಕೊಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜವಳಿ ಮಳಿಗೆ ಉದ್ಘಾಟನೆಗಾಗಿ ಭಾನುವಾರ ವಿಶೇಷ ವಿಮಾನದ ಮೂಲಕ ನಗರಕ್ಕೆ ಬಂದ ಅವರು, ಅಪಘಾತ ಕುರಿತು ದುಃಖ ವ್ಯಕ್ತಪಡಿಸಿದರು.

ದುಡಿಯುವ ಜನ ಮೃತಪಟ್ಟಿದ್ದು ಅತೀವ ದುಃಖದ ಸಂಗತಿ. ಇದು ದೊಡ್ಡ ಅನಾಹುತ. ಘಟನೆಯಲ್ಲಿ ಗಾಯಗೊಂಡವರಿಗೂ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಚಿಕಿತ್ಸೆ ಕೊಡಿಸಲಾಗುವುದು ಎಂದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು