ಕೌಜಲಗಿ: ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್‌ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಗೋಕಾಕ ಘಟಕದ ಉಪಕೇಂದ್ರಾಧಿಕಾರಿ ವಿ.ಎಂ.ಕೌಜಲಗಿ ಹೇಳಿದರು.
ಸಮೀಪದ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಈಚೆಗೆ ನಡೆದ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ ಎಂದರು.
ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ₹17.62 ಲಕ್ಷ ಲಾಭ ಗಳಿಸಿದೆ. ಸಂಘದ ಶೇರ ಸದಸ್ಯರಿಗೆ ಶೇ20ರಷ್ಟು ₹39,440 ಡಿವ್ಹಿಡೆಂಡ್, ಶೇ65ರಷ್ಟು ಒಟ್ಟು ₹8,16,391 ಬೋನಸ್ ಸದಸ್ಯರಿಗೆ ವಿತರಿಸಲಾಗುವುದು ಎಂದರು.
ಸಂಘದ ಅಧ್ಯಕ್ಷ ಯಲ್ಲಾಲಿಂಗ ದೇಯಣ್ಣವರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು.
ಬಹುಮಾನ ವಿತರಣೆ:ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಕಳು ಮತ್ತು ಎಮ್ಮೆ ಹಾಲು ವಿಭಾಗದಲ್ಲಿ ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಪ್ರಥಮ, ದ್ವೀತಿಯ, ತೃತೀಯ ಸ್ಥಾನಗಳಿಗೆ ಹಾಗೂ ₹2 ಸಾವಿರಕ್ಕಿಂತ ಹೆಚ್ಚು ಬೋನಸ್ ಪಡೆದ ಸಂಘದ ಸದಸ್ಯರಿಗೆ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಗೃಹೋಪಯೋಗಿ ಉಪಕರಣಗಳನ್ನು ಬಹುಮಾನ ರೂಪದಲ್ಲಿ ನೀಡಿ ಸನ್ಮಾನಿಸಿದರು.
ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಗೋಕಾಕ ಘಟಕದ ವಿಸ್ತರಣಾಧಿಕಾರಿ ಗೋಪಾಲ ಭಂಡಾರಿ, ಮಲ್ಲಿಕಾರ್ಜುನ ಪೇದನ್ನವರ, ಮಹಾದೇವ ಕಂಬಿ, ಸಿದ್ಧೇಶ್ವರ ಕುರಬೇಟ, ಅರ್ಜುನ ಬ್ಯಾಗಿ, ಶಿವಪ್ಪ ಬಳಿಗಾರ, ವಿಜಯ ಮಠದ, ಮಹಾದೇವ ಮಾಳೇದ, ಸತ್ತೆಪ್ಪ ಹೊರಟ್ಟಿ, ಸುರೇಶ ತಳವಾರ, ಬಸಪ್ಪ ತೋಟಗಿ, ಸಿದ್ದಪ್ಪ ಕೋಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.