ಸೋಮವಾರ, ಅಕ್ಟೋಬರ್ 26, 2020
20 °C

ಸವದತ್ತಿ ಯಲ್ಲಮ್ಮ ಸೇರಿ 3 ದೇವಸ್ಥಾನ ಇನ್ನೊಂದು ತಿಂಗಳು ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಅ.31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

‘ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊರೊನಾ ಕಾರಣದಿಂದ ಈ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಮಾರ್ಚ್‌ 18ರಿಂದ ನಿಷೇಧಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು