ಶುಕ್ರವಾರ, ಮೇ 27, 2022
28 °C

ದಾಸೋಹ‌ ದಿನ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ‘ದಾಸೋಹ ದಿನ’ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಶುಕ್ರವಾರ ಆಚರಿಸಲಾಯಿತು.

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ‘ದಾಸೋಹ ದಿನ‘ವನ್ನಾಗಿ ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಫೋಟೊಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪೂಜೆ‌ ನೆರವೇರಿಸಿ, ಪುಷ್ಪಾರ್ಚನೆ ಮಾಡಿದರು.

ಇದೇ ವೇಳೆ ಅಂಬಿಗರ ‌ಚೌಡಯ್ಯನವರ ಫೋಟೊಗೂ ಪೂಜೆ ಸಲ್ಲಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ನಡೆಸಲಾಯಿತು.

ಸಮಾಜದ ಮುಖಂಡರಾದ ಜಿ.ಜಿ. ತಳವಾರ, ಬಸವರಾಜ ಸುಣಗಾರ, ರವಿಶಂಕರ ಚನಾಳ, ರಮೇಶ ಘಸ್ತಿ, ವಿಠ್ಠಲ ಸುಣಗಾರ, ಮಹಾಬಲೇಶ್ವರ ಸಾಬಣ್ಣವರ, ಎಚ್.ಟಿ. ವಾಲೀಕಾರ, ಬಿ. ಸುರೇಖಾ, ವಿಜಯ ಹೊಂಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.