ವಾಣಿಜ್ಯ ಮಳಿಗೆಗಳಿಂದ ಬರುವ ಆದಾಯವನ್ನು ಕನ್ನಡ ಭವನದ ನಿರ್ವಹಣೆಗೆ ಬಳಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದರಿಂದ ದಿನಕ್ಕೆ ₹500ರಿಂದ ₹1 ಸಾವಿರ ಬಾಡಿಗೆ ಶುಲ್ಕ ಮಾತ್ರ ಪಡೆಯಬೇಕು
ಅಶೋಕ ಚಂದರಗಿ ಸದಸ್ಯ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಕನ್ನಡ ಭವನದ ನಿರ್ವಹಣೆಗೆ ಶೀಘ್ರ ಸಮಿತಿ ರಚಿಸುತ್ತೇವೆ. ಜತೆಗೆ ಸಭೆ ನಡೆಸಿ ಮುಂದಿನ ಕ್ರಮ ವಹಿಸುತ್ತೇವೆ
ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ
ಏನೇನು ಜವಾಬ್ದಾರಿ?
ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾಯಂ ಸದಸ್ಯರು ಮಹಾನಗರ ಪಾಲಿಕೆ ಉಪ ಆಯುಕ್ತರು (ಕಂದಾಯ) ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಬೆಳಗಾವಿ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೋಪಯೋಗಿ ಇಲಾಖೆ ಬೆಳಗಾವಿ ಕಾರ್ಯನಿರ್ವಾಹಕ ಎಂಜಿನಿಯರ್ ಕೆಆರ್‌ಐಡಿಎಲ್ ಬೆಳಗಾವಿ ಕಾರ್ಯನಿರ್ವಾಹಕ ಎಂಜಿನಿಯರ್ ನಿರ್ಮಿತಿ ಕೇಂದ್ರದ ಬೆಳಗಾವಿ ಯೋಜನಾ ನಿರ್ದೇಶಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಸದಸ್ಯರಾಗಿದ್ದಾರೆ. ಒಂದು ವಾರದೊಳಗಾಗಿ ಸಮಿತಿ ಸದಸ್ಯರು ಕನ್ನಡ ಭವನ ಅದರ ಆವರಣದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದ ಆಕ್ಷೇಪಣೆ ಪರಿಶೀಲಿಸುತ್ತಾರೆ. ವಾಣಿಜ್ಯ ಮಳಿಗೆಗಳಿಂದ ಸಂಗ್ರಹಿಸಿದ ಬಾಡಿಗೆ ಮತ್ತು ದಾಖಲೆಗಳ ವಿವರಗಳನ್ನು ಸದಸ್ಯ ಕಾರ್ಯದರ್ಶಿ ಸಂಗ್ರಹಿಸಿ ನಿರ್ವಹಣಾ ಸಮಿತಿ ಮುಂದೆ ಮಂಡಿಸುತ್ತಾರೆ. ನಂತರ ಅಧ್ಯಕ್ಷರ ಅನುಮೋದನೆಯೊಂದಿಗೆ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಮಾಹಿತಿ ಸಲ್ಲಿಸುತ್ತಾರೆ.