ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದೇನೂರ ಶಾಲೆ ದುರಸ್ತಿ ಕಾಮಗಾರಿ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Last Updated 17 ಮೇ 2022, 8:18 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗೆ ₹ 20 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ.

ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಲ್ಲಿ ಯೋಜನೆಯನ್ನು ಅಳವಡಿಸಿಕೊಂಡು ದುರಸ್ತಿ ಕಾಮಗಾರಿಯನ್ನು ಮಂಗಳವಾರದಿಂದಲೇ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

'ಜಿಲ್ಲಾ ಪಂಚಾಯ್ತಿಯ ₹ 10 ಲಕ್ಷ, ತಾಲ್ಲೂಕು ಪಂಚಾಯ್ತಿಯ ₹ 5 ಲಕ್ಷ ಹಾಗೂ ಗ್ರಾಮ ಪಂಚಾಯ್ತಿ ವತಿಯಿಂದ ₹ 5 ಲಕ್ಷ ಒದಗಿಸಿ ಕಾಮಗಾರಿ ನಡೆಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.

ತಹಶೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ದರ್ಶನ್ ಹಾಗೂ ನಾನು ಕಾಮಗಾರಿ ಕುರಿತು ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಶಾಲೆಯ ಕೊಠಡಿಗಳು ದುಃಸ್ಥಿತಿಯಲ್ಲಿರುವುದರಿಂದಾಗಿ, ಆವರಣದಲ್ಲಿ ಟೆಂಟ್ ಹಾಕಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಸುವ ಮೂಲಕ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದ್ದರು. ಇದರಿಂದ ಎಚ್ಚೆತ್ತು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT