ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ಕೈಗಾರಿಕಾ ಘಟಕ ಜ‍ಪ್ತಿಗೆ ಆದೇಶ

Last Updated 6 ನವೆಂಬರ್ 2020, 14:29 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯ ಮಾಲಿನ್ಯ ನಿಯಂತ್ರಣ ಕಾಯ್ದೆ ಪ್ರಕಾರ ನಿಯಮಗಳನ್ನು ಪಾಲಿಸದಿರುವ ಅಶೋಕ ಐರನ್ ವರ್ಕ್ಸ್‌ ಪ್ರೈ.ಲಿ.ಗೆ ಸಂಬಂಧಿಸಿದ ಮೂರು ಹಾಗೂ ಮಚ್ಚೆ ಗ್ರಾಮದಲ್ಲಿರುವ ಓಂ ಶ್ರೀ ಸರ್ವಿಸಿಂ‌ಗ್ ಸೆಂಟರ್‌ ಕೈಗಾರಿಕಾ ಘಟಕಗಳನ್ನು ಜಪ್ತಿ (ಸೀಜ್) ಮಾಡುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ.

ಈ ಕೈಗಾರಿಕಾ ಘಟಕಗಳಲ್ಲಿ ನಿಯಮಗಳನ್ನು ಪಾಲಿಸದಿರುವುದರಿಂದ ತಕ್ಷಣವೇ ಸೀಜ್ ಮಾಡುವಂತೆ ಸೂಚಿಸಿದ್ದಾರೆ. ಪರಿಸರ ಅಧಿಕಾರಿಗಳು ಈ ಘಟಕಗಳನ್ನು ಪೊಲೀಸ್ ಭದ್ರತೆಯೊಂದಿಗೆ ಜಪ್ತಿ ಮಾಡಬೇಕು. ಮಾಲಿನ್ಯಕ್ಕೆ ಮತ್ತು ಸುತ್ತಮುತ್ತಲಿನ ಜನರ ಆರೋಗ್ಯಕ್ಕೆ ಹಾನಿಯಾಗುವಂತಹ ರಾಸಾಯನಿಕಗಳು ಇದ್ದಲ್ಲಿ ಅವುಗಳನ್ನು ನಿಯಮಾನುಸಾರ ಮತ್ತು ಸುರಕ್ಷಿತವಾಗಿ ವಿಲೇವಾರಿ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT