ರಾಯಬಾಗ: ಅಕ್ಟೋಬರ್ 19 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ರಾಯಬಾಗ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸೌಹಾರ್ದ ಸಭೆ ಮಂಗಳವಾರ ಪಟ್ಟಣದ ಮಹಾವೀರ ಭವನದಲ್ಲಿ ಅರಭಾವಿ ಶಾಸಕ ಹಾಗೂ ಬೆಳಗಾವಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ನೇತೃತ್ವದಲ್ಲಿ ನಡೆಯಿತು.

‘ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದರೂ, ಮೊದಲ ಹಂತದ ಪ್ರಚಾರ ಈಗಾಗಲೇ ಆರಂಭವಾಗಿದೆ. ಬಿಡಿಸಿಸಿ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ನಮ್ಮ ಎಲ್ಲಾ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಈಗಾಗಲೇ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ನಮ್ಮ ಗುಂಪು ಮತ್ತೊಂದು ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂಬ ವಿಶ್ವಾಸ ನಮಗಿದೆ’ ಎಂದು ಬಾಲಚಂದ್ರ ಜಾರಕಿಹೊಳಿ ಸಭೆಯಲ್ಲಿ ಹೇಳಿದರು.

ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕ್ನ್ನು ಬಲಿಷ್ಠವಾಗಿ ಕಟ್ಟಲು ಸಮಿತಿಯ ಎಲ್ಲ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆಮಾಡಬೇಕು. ಈ ಮೊದಲು ಇದ್ದವರು ತಾವು ಇಲ್ಲದೇ ಡಿಸಿಸಿ ಬ್ಯಾಂಕ್ ನಡೆಯುವುದಿಲ್ಲವೆಂದು ತಿಳಿದಿದ್ದರು. ಆದರೆ ಅಪ್ಪಾಸಾಹೇಬ ಕುಲಗುಡೆ ಅವರ ಅಧ್ಯಕ್ಷತೆಯಲ್ಲಿ ಬ್ಯಾಂಕ್ ₹ 600 ಕೋಟಿ ಠೇವಣಿ ಸಂಗ್ರಹಿಸಿದ್ದು, ಈ ಬಾರಿ ಮತ್ತೆ ಅವರನ್ನು ನಿರ್ದೇಶಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಎಲ್ಲ ಪಕ್ಷದ ಮುಖಂಡರೊಂದಿಗೆ ಸೌಹಾರ್ದತೆಯಿಂದ ಇರುವ ಸೌಮ್ಯ ಸ್ವಭಾವದ ಕುಲಗುಡೆ ಅವರು, ಬ್ಯಾಂಕ್ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಬ್ಯಾಂಕ್ಗೆ ಆಧುನಿಕ ಸ್ಪರ್ಶ ನೀಡಿ, ಸಹಕಾರ ಸಂಘವನ್ನು ಎತ್ತರಕ್ಕೆ ಬೆಳೆಸಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ಮಾತನಾಡಿ, ‘ಸತತ 4 ಬಾರಿ ನನ್ನನ್ನು ಆಯ್ಕೆ ಮಾಡಿದ್ದಿರಿ, ಈ ಬಾರಿ ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿ, ರೈತರ ಸೇವೆಗೆ ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು. ಬ್ಯಾಂಕ್ ನಿರ್ದೇಶಕರಾದ ರಾಜೇಂದ್ರ ಅಂಕಲಗಿ, ಶ್ರೀಕಾಂತ ಢವಣ ಹಾಗೂ ಶಂಕರಗೌಡ ಪಾಟೀಲ, ಮುಖಂಡರಾದ ಸಂಜೀವಕುಮಾರ ಬಾನೆ (ಸರಕಾರ), ಅರ್ಜುನ ನಾಯಿಕವಾಡಿ, ಪಾರಿಸ ಉಗಾರೆ ಸೇರಿದಂತೆ ತಾಲ್ಲೂಕಿನ ಎಲ್ಲ ಪಿಕೆಪಿಎಸ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳು ಮತ್ತು ಬ್ಯಾಂಕ್ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.