ಗುರುವಾರ , ಡಿಸೆಂಬರ್ 3, 2020
19 °C

ಡಿಸಿಸಿ ಬ್ಯಾಂಕ್ ಚುನಾವಣೆ: ಮೂವರಿಂದ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿ ನ. 6ರಂದು ನಡೆಯಲಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಬುಧವಾರ ಮೂವರು ನಾಮಪತ್ರ ಸಲ್ಲಿಸಿದರು.

‘ಬೈಲಹೊಂಗಲ ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ವಕ್ಕಂದದ ಬಸನಗೌಡ ರುದ್ರಗೌಡ ಪಾಟೀಲ, ತಿಗಡಿಯ ಆನಂದ ಜಗದೀಶ ಜಕಾತಿ  ಹಾಗೂ ಪಟ್ಟಣ ಸಹಕಾರ ಬ್ಯಾಂಕ್‌ಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಗುರಪ್ಪ ಚನಬಸಪ್ಪ ಮೆಟಗುಡ್ಡ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.

ಇದರೊಂದಿಗೆ ಈವರೆಗೆ 11 ಮಂದಿ ಉಮೇದುವಾರಿಕೆ ಸಲ್ಲಿಸಿದಂತಾಗಿದೆ.

ನಾಮಪತ್ರ ಸಲ್ಲಿಸಲು ಅ.29 ಕೊನೆಯ ದಿನವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು