ಶನಿವಾರ, ಜನವರಿ 16, 2021
19 °C

ಬೆಳಗಾವಿ: ಡಿಸಿಎಂ ಜಿಲ್ಲಾ ಪ್ರವಾಸ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ನ. 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 8.50ಕ್ಕೆ ಸಾಂಬ್ರಾ ವಿಮಾನನಿಲ್ದಾಣಕ್ಕೆ ಬಂದಿಳಿಯುವ ಅವರು, ಬೆಳಿಗ್ಗೆ 11.30ಕ್ಕೆ ಮೂಡಲಗಿ ತಾಲ್ಲೂಕು ಅರಭಾವಿಯಲ್ಲಿ ನಿರ್ಮಿಸಿರುವ ಜಿಟಿಟಿಸಿ ಕೇಂದ್ರದ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 2.30ಕ್ಕೆ ವಿಟಿಯುನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. 3.45ರಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡುವರು. ಸಂಜೆ 5.10ರಿಂದ ಬಿಜೆಪಿ ಕಚೇರಿ, ಬಳಿಕ ಆರ್‌ಎಸ್‌ಎಸ್‌ ಕಚೇರಿಗಳಿಗೆ ತೆರಳಿ ಮುಖಂಡರೊಂದಿಗೆ ಚರ್ಚಿಸುವರು. ರಾತ್ರಿ 8.50ಕ್ಕೆ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು