ಬುಧವಾರ, ಮೇ 27, 2020
27 °C

ಜನಪ್ರತಿನಿಧಿಗಳ ಸಾಲಿನಲ್ಲಿ ಲಕ್ಷ್ಮಣ ಸವದಿ ಪುತ್ರ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ಕೊರೊನ ವೈರಸ್‌ ಹರಡುವುದನ್ನು ತಡೆಯುವ ಉದ್ದೇಶದಿಂದ ಚರ್ಚಿಸಲು ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ವೇದಿಕೆಯಲ್ಲಿ ಕುಳಿತಿದ್ದುದು ಅ‌ಚ್ಚರಿಗೆ ಕಾರಣವಾಯಿತು.

ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲೂ ಹಬ್ಬಿದೆ. ಸಂಸದರು ಹಾಗೂ ಶಾಸಕರ ಎದುರೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಯಾವುದೆ ಚುನಾಯಿತ ಪ್ರತಿನಿಧಿ ಅಲ್ಲದವರನ್ನು ವೇದಿಕೆ ಮೇಲೆ ಕೂರಲು ಅವಕಾಶ ಕೊಟ್ಟಿರುವುದು ಸರಿಯಲ್ಲ ಎನ್ನುವ ವಿರೋಧ ವ್ಯಕ್ತವಾಗಿದೆ. ತಾಲ್ಲೂಕು ದಂಡಾಧಿಕಾರಿ ವೇದಿಕೆ ಮುಂದೆ ಕುಳಿತಿದ್ದರು! ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯೂ ವೇದಿಕೆಯಲ್ಲಿರಲಿಲ್ಲ. ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಅದು ಅಧಿಕಾರಿಗಳ ಸಭೆಯೋ, ಬಿಜೆಪಿಯದ್ದೋ ಎಂದು ಹಲವರು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು