ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿ ಶವವನ್ನು ಬೈಸಿಕಲ್ ಮೇಲೆ ಸಾಗಿಸಿದ ಘಟನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದ್ದಾರೆ. ‘ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದಿದ್ದಾರೆ.

‘ಕೊರೊನಾ ಸೋಂಕು ಅಥವಾ ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದವರ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಅಂತ್ಯಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆಂದು ಸಹಾಯವಾಣಿ ರೂಪಿಸಬೇಕು. ನಿರ್ವಹಣೆಗೆ ಅಧಿಕಾರಿ ಒಬ್ಬರನ್ನು ನಿಯೋಜಿಸಬೇಕು ಎಂದು ಆದೇಶಿಸಿದ್ದೇನೆ. ಮಂದಿನ ದಿನಗಳಲ್ಲಿ ಅಮಾನವೀಯ ಘಟನೆಗಳು ನಡೆದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.

‘ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.