ಯೋಧನ ಸಾವು: ಕಂಬನಿ ಮಿಡಿದ ಗ್ರಾಮಸ್ಥರು

7

ಯೋಧನ ಸಾವು: ಕಂಬನಿ ಮಿಡಿದ ಗ್ರಾಮಸ್ಥರು

Published:
Updated:
Deccan Herald

ಖಾನಾಪುರ: ತಾಲ್ಲೂಕಿನ ಬೀಡಿ ಹೋಬಳಿಯ ಕಸಮಳಗಿ ಗ್ರಾಮದ ನಿವಾಸಿ, ಭಾರತೀಯ ಸೇನೆಯ ಯೋಧ ಹವಾಲ್ದಾರ್ ಮೌಲಾಲಿ ಹುಸೇನಸಾಬ್ ಪಾಟೀಲ (40) ಶುಕ್ರವಾರ ಮಹಾರಾಷ್ಟ್ರದ ಪುಣೆಯ ಮಿಲಿಟರಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಶನಿವಾರ ಬೆಳಿಗ್ಗೆ ಗ್ರಾಮಕ್ಕೆ ಬಂದದ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

21 ವರ್ಷಗಳಿಂದ ಸೇನೆಯಲ್ಲಿದ್ದ ಮೌಲಾಲಿ, ಕಳೆದೊಂದು ವರ್ಷದಿಂದ ಪಶ್ಚಿಮ ಬಂಗಾಳದ ಮಿಲಿಟರಿ ಯುನಿಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚಿನ ಕೆಲ ತಿಂಗಳಿಂದ ರಕ್ತದ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ, ಒಂದೂವರೆ ತಿಂಗಳ ಹಿಂದೆ ಚಿಕಿತ್ಸೆಗಾಗಿ ಪುಣೆಯ ಮಿಲಿಟರಿ ಆಸ್ಪತ್ರೆಗೆ ದಾಖಲಾಗಿದ್ದರು.

‘ಗುರುವಾರ ಮಧ್ಯರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು’ ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ.

ಗ್ರಾಮದ ಹೊರವಲಯದ ಸ್ಮಶಾನದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. 

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !