ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಈದ್ ಉಲ್ ಫಿತ್ರ್’ ಸರಳ ಆಚರಣೆ ನಾಳೆ

Last Updated 13 ಮೇ 2021, 12:48 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣ ದೃಷ್ಟಿಯಿಂದ ಈ ಬಾರಿಯ ‘ಈದ್ ಉಲ್ ಫಿತ್ರ್’ ಅನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

ನಗರದ ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಚಂದ್ರದರ್ಶನ ಸಮಿತಿ ಸಭೆಯಲ್ಲಿ‌ ಈ ನಿರ್ಣಯ ಕೈಗೊಳ್ಳಲಾಯಿತು.

ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ ರಾಜು ಸೇಠ್ ಮಾತನಾಡಿ, ‘ಪ್ರತಿ ವರ್ಷ ಈದ್‌ ಉಲ್‌ ಫಿತ್ರ್‌ ಅಂಗವಾಗಿ ಈದ್ಗಾ ಮೈದಾನಗಳಲ್ಲಿ ಸಾಮಾಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಈ ಬಾರಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಮನೆಯಲ್ಲೇ ಪ್ರಾರ್ಥಿಸಬೇಕು ಎಂದು ನಿರ್ಧರಿಸಲಾಗಿದೆ. ಇದನ್ನು ಎಲ್ಲರೂ ಪಾಲಿಸಬೇಕು. ಹಬ್ಬದ ಆಚರಣೆಗೆಂದು ವ್ಯಯಿಸುತ್ತಿದ್ದ ಹಣವನ್ನು ಸಮಾಜ ಸೇವಾ ಕೆಲಸಕ್ಕೆ ಬಳಸಬೇಕು. ಬಡವರಿಗೆ ದಾನ-ಧರ್ಮ ಮಾಡಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಕೋವಿಡ್‌ನಿಂದ ಪಾರಾಗಬೇಕು’ ಎಂದು ತಿಳಿಸಿದರು.

ಮುಫ್ತಿ ಮಂಜೂರ್ ಆಲಂ ಮತ್ತು ಅಬ್ದುಲ್ ಗಫೂರ್ ಘೀವಾಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT