ಬೆಳಗಾವಿಯಲ್ಲಿ ನಡೆಯದ ಬಂದ್‌: ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹ

7

ಬೆಳಗಾವಿಯಲ್ಲಿ ನಡೆಯದ ಬಂದ್‌: ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹ

Published:
Updated:
Deccan Herald

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಹಾಗೂ ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಬೆಳಗಾವಿ ಸೇರಿದಂತೆ 13 ಜಿಲ್ಲೆಗಳಿಗೆ ಎಲ್ಲ ಸರ್ಕಾರಗಳಿಂದಲೂ ಅನ್ಯಾಯವಾಗಿದೆ. ಇದರಿಂದ ಪ್ರಾದೇಶಿಕ ಅಸಮಾನತೆ ತಲೆದೋರಿದೆ. ಈ ಭಾಗದ ಜನಪ್ರತಿನಿಧಿಗಳು ವೈಯಕ್ತಿಕ ಹಿತಾಸಕ್ತಿ ಮತ್ತು ಸ್ವಾರ್ಥ ರಾಜಕಾರಣ ಮಾಡುತ್ತಾ ಬಂದಿರುವುದರಿಂದ, ಉತ್ತರ ಕರ್ನಾಟಕ ಹಿಂದುಳಿದಿದೆ. ಈ ತಾರತಮ್ಯ ನಿವಾರಣೆಗೆ ಸರ್ಕಾರ ಮುಂದಾಗಬೇಕು. ಇಲ್ಲವೇ, ಪ್ರತ್ಯೇಕ ರಾಜ್ಯದ ಕೂಗು ತೀವ್ರಗೊಳ್ಳುವುದರಲ್ಲಿ ಅಚ್ಚರಿ ಇಲ್ಲ’ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಡಿವೇಶ ಇಟಗಿ ತಿಳಿಸಿದರು.

‘ಸ್ವಾಮೀಜಿಗಳ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಹೋರಾಟದ ಫಲವಾಗಿ, ಕ್ರಮ ಕೈಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 15 ದಿನ ಕಾಲಾವಕಾಶ ಕೇಳಿದ್ದಾರೆ. ನಂತರವೂ ಸ್ಪಂದನೆ ದೊರೆಯದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಮುಖಂಡ ಭೀಮಪ್ಪ ಗಡಾದ ಎಚ್ಚರಿಕೆ ನೀಡಿದರು.

‘ಪ್ರತ್ಯೇಕ ರಾಜ್ಯ ರಚನೆಗಾಗಿ ಕೆಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು. ಅದಕ್ಕೆ ನಮ್ಮ ಬೆಂಬಲವಿಲ್ಲ. ಸಮಗ್ರ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಿದ್ದಲ್ಲಿ, ಆ ಬಗ್ಗೆ ಯೋಚಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.‌

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಸಮಿತಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಮಾಧುಭರಮಣ್ಣವರ, ಮುಖಂಡರಾದ ಚನ್ನಪ್ಪ ಅಥಣಿ, ಶಂಕರ ಕರಿಹೊಳಿ, ವಿರೂಪಾಕ್ಷ, ಅಪ್ಪಣ್ಣ ಬಾಮನೆ ಇದ್ದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಹುಬ್ಬಳ್ಳಿಯ ಸಂಘಟನೆಯೊಂದು ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ಬೆಂಬಲ ದೊರೆಯಲಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !