ಗುರುವಾರ , ಮಾರ್ಚ್ 23, 2023
28 °C

ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು.

ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಮಂಡಳಿಯ ಎಇ ವಿ.ಎಲ್. ಚಂದ್ರಪ್ಪ, ಎಇಇ ಎಸ್.ಬಿ. ಹಾಲನ್ನವರ, ಸತೀಶ ಶಹಾಪುರಕರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.