ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ, ಕಾರ್ಯವೈಖರಿ, ಕೇಂದ್ರ ಬಜೆಟ್ನಲ್ಲಿ ಘೋಷಿಸಿದ ಅನೇಕ ಜನಪರ ಯೋಜನೆಗಳು ದೆಹಲಿ ಮತದಾರರ ಮನಸೆಳೆದಿವೆ. ಹಾಗಾಗಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ.

‘ಆಮ್ ಆದ್ಮಿ ಪಕ್ಷ ಸುಳ್ಳು ಘೋಷಣೆ ಮಾಡುತ್ತ ಬಂದಿದೆ. ದೆಹಲಿಯ ಬೆಳವಣಿಗೆಗೆ ಪೂರಕವಾದ ಯೋಜನೆಗಳ ಅನುಷ್ಠಾನದಲ್ಲಿ ವಿಫಲವಾಗಿದೆ. ಹಾಗಾಗಿ ಅರವಿಂದ ಕೇಜ್ರಿವಾಲ್ ಹೀನಾಯ ಸೋಲು ಕಂಡಿದ್ದಾರೆ. ಭ್ರಷ್ಟ ಆಡಳಿತದಿಂದ ಬೇಸತ್ತು ದೆಹಲಿಯ ಜನರು, ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿಗೆ ಹಸಿರುನಿಶಾನೆ ತೋರಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ, ತೆಲಂಗಾಣ ಮತ್ತಿತರ ರಾಜ್ಯಗಳಲ್ಲೂ ಕುಸಿಯಲಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.