ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಧಾರ್ಮಿಕ ಸಭೆ: ಜಿಲ್ಲೆಯ 62 ಜನರಲ್ಲಿ ಸೋಂಕಿನ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ

Last Updated 1 ಏಪ್ರಿಲ್ 2020, 13:54 IST
ಅಕ್ಷರ ಗಾತ್ರ

ಬೆಳಗಾವಿ: ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿ ಬಂದಿರುವ ಬೆಳಗಾವಿ ಜಿಲ್ಲೆಯ 62 ಜನರ ಮಾಹಿತಿ ಲಭಿಸಿದೆ. ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಇವರ ಪೈಕಿ ಮಧುಮೇಹ, ಅಸ್ತಮಾ ಮತ್ತಿತರ ತೊಂದರೆ ಹೊಂದಿರುವ 50 ವರ್ಷ ವಯಸ್ಸು ಮೇಲ್ಪಟ್ಟ 27 ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ.

ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT