ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿವು ಉಪ್ಪಾರ ಸಾವಿನ ತನಿಖೆ ಸಿಬಿಐಗೆ ವಹಿಸಿ’

Last Updated 1 ಜುಲೈ 2019, 13:29 IST
ಅಕ್ಷರ ಗಾತ್ರ

ಬೆಳಗಾವಿ: ಇತ್ತೀಚೆಗೆ ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಗೋರಕ್ಷಕ ಶಿವು ಉಪ್ಪಾರ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ಶ್ರೀರಾಮಸೇನಾ ಕರ್ನಾಟಕ ಸಂಘಟನೆ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಘಟಕದ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ, ‘ಗೋವುಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದ ಶಿವು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಾಗಿರಲಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೇ ಆಗಿದ್ದರೆ ಆತ ತನ್ನ ಮನೆ ಅಥವಾ ಊರಿನಲ್ಲೇ ಮಾಡಿಕೊಳ್ಳುತ್ತಿದ್ದ. ಬೇರೆ ಊರಿಗೆ ಬಂದು ಸಾಯುತ್ತಿರಲಿಲ್ಲ. ಹೀಗಾಗಿ, ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.

‘ತನ್ನ ಸಾವಿಗೂ ಕೆಲ ದಿನಗಳ ಹಿಂದೆಶಿವುಮಾಡಿರುವ ಫೇಸ್‌ಬುಕ್‌ ಲೈವ್‌ ವಿಡಿಯೊದಲ್ಲಿಜೀವ ಬೆದರಿಕೆ ಇರುವುದಾಗಿ ತಿಳಿಸಿದ್ದಾನೆ. ಕೆಲ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿದ್ದಾನೆ. ಆ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಬೇಕು. ಪ್ರಕರಣದ ಬಗ್ಗೆ ಎಲ್ಲ ರೀತಿಯಿಂದಲೂ ತನಿಖೆ ನಡೆಸಿ, ಸತ್ಯಾಸತ್ಯತೆ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದರು.

‘ಮೃತ ಶಿವು ಕುಟುಂಬಸ್ಥರಿಗೆ ₹ 10 ಲಕ್ಷ ಪರಿಹಾರ ವಿತರಿಸಬೇಕು. ರಾಜ್ಯದಿಂದ ಗೋವಾ, ಮಹಾರಾಷ್ಟ್ರ ಹಾಗೂ ಕೇರಳಕ್ಕೆ ಅಕ್ರಮ ಗೋವು ಸಾಗಾಟ ಮಾಡಲಾಗುತ್ತಿದ್ದು, ಇದನ್ನು ತಡೆಗಟ್ಟಬೇಕು. ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಬೇಕೆಂದು’ ಆಗ್ರಹಿಸಿದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಿನಯ ಅಂಗ್ರೋಳಿ, ಕಾರ್ಯಕರ್ತರಾದ ಕಿರಣ ಶೆಟ್ಟಿ, ಸಚಿನ ಗರಡೆ, ವಿನಾಯಕ ಕಡೋಲಕರ್, ಅನೂಪ ಕಿತ್ತೂರ, ನಿಕೇತನ ಮೆಣಸೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT