ಶನಿವಾರ, ಅಕ್ಟೋಬರ್ 23, 2021
21 °C

ತೆಲಸಂಗ: ಆಧಾರ್ ಸೇವೆ ಪುನರಾರಂಭಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲಸಂಗ: ‘ಗ್ರಾಮದ ಅಟಲ್‍ಜೀ ಜನಸ್ನೇಹಿ ಕೇಂದ್ರಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಅರ್ಜಿ ಕೆಲಸ ಸ್ಥಗಿತಗೊಂಡು 6 ತಿಂಗಳುಗಳೆ ಕಳೆದರೂ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ’ ಎಂದು ಆರೋಪಿಸಿ ಗ್ರಾಮಸ್ಥರು ಇಲ್ಲಿನ ಉಪತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ತೆಲಸಂಗ ಹೋಬಳಿ ಜನರು ನಿತ್ಯ ತಾಲ್ಲೂಕು ಕಚೇರಿಗೆ ಅಲೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಆಧಾರ್ ಕಾರ್ಡ್ ಕೇಂದ್ರ ಆರಂಭಕ್ಕೆ ಕ್ರಮ ವಹಿಸದಿರುವುದು ನೋಡಿದರೆ ಆಡಳಿತ ವ್ಯವಸ್ಥೆ ಎಚ್ಚರದಿಂದ ಇದೆಯೇ ಎಂಬ ಪ್ರಶ್ನೆ ನಮ್ಮಲ್ಲಿ ಮೂಡುತ್ತಿದೆ’ ಎಂದು ಮುಖಂಡ ಮಸ್ತಾನ ನದಾಫ ಆಕ್ರೋಶ ವ್ಯಕ್ತಪಡಿಸಿದರು.

‘ಪ್ರತಿಯೊಂದು ಸೌಲಭ್ಯ ಪಡೆಯುವುದಕ್ಕೂ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ. ತಿದ್ದುಪಡಿ ಮತ್ತು ಹೊಸ ಕಾರ್ಡ್ ಅರ್ಜಿಗಾಗಿ 32 ಗ್ರಾಮಗಳಿಗೆ ಇದೊಂದೆ ಕೇಂದ್ರವಾಗಿದೆ. ಇಲ್ಲಿ ಸೇವೆ ಸಿಗದಿರುವುದರಿಂದ ಜನರಿಗೆ ತೀವ್ರ ತೊಂದರೆಯಾಗಿದೆ. ಆದಷ್ಟು ಬೇಗ ಕೇಂದ್ರ ಪ್ರಾರಂಭಿಸದಿದ್ದರೆ ನಾಡಕಚೇರಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು’ ಎಂದು ಮುಖಂಡರಾದ ಅದೀಕ ಲಾಮಖಾನೆ, ರಾವಸಾಬ ದಶವಂತ, ಗುರು ಕೋಡ್ನಿ, ಅರ್ಜುನ ಮೋರೆ, ಸಂದೀಪ ಮೋರೆ, ಸಿದ್ದು ಚವ್ಹಾಣ, ಅಲ್ತಾಫ ನಧಾಪ ಎಚ್ಚರಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು