ಸೋಮವಾರ, ಜೂನ್ 21, 2021
30 °C

ಸಚಿವ ನಾರಾಯಣಗೌಡ ವಿರುದ್ಧ ರಾಜ್ಯ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮಹಾರಾಷ್ಟ್ರದ ಪರವಾಗಿ ಘೋಷಣೆ ಕೂಗಿರುವ ಪೌರಾಡಳಿತ ಸಚಿವ ನಾರಾಯಣಗೌಡ ವಿರುದ್ಧ ರಾಜ್ಯದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಕಾರ್ಯಕ್ರಮವೊಂದರಲ್ಲಿ ಘೋಷಣೆ ಹಾಕಿರುವ ನಾರಾಯಣಗೌಡ ಅವರ ವಿಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಶೋಕ ಚಂದರಗಿ, ‘ಪಾಕಿಸ್ತಾನದ ಪರವಾಗಿ ಘೋಷಣೆ ಹಾಕಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದಂತೆ, ಈ ಸಚಿವರ ವಿರುದ್ಧ ರಾಜ್ಯ ದ್ರೋಹದ ಪ್ರಕರಣವನ್ನು ರಾಜ್ಯದ ಪೊಲೀಸರು ಏಕೆ ದಾಖಲಿಸಬಾರದು’ ಎಂದು ಪ್ರಶ್ನಿಸಿದ್ದಾರೆ.

‘ಮುಖ್ಯಮಂತ್ರಿಗಳು ಈ ಸಚಿವರ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು