ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ ಜಿಲ್ಲೆ ಘೋಷಣೆಗೆ ಆಗ್ರಹ

Published 13 ಡಿಸೆಂಬರ್ 2023, 14:33 IST
Last Updated 13 ಡಿಸೆಂಬರ್ 2023, 14:33 IST
ಅಕ್ಷರ ಗಾತ್ರ

ಗೋಕಾಕ: ಬೆಳಗಾವಿ ಜಿಲ್ಲೆ ವಿಭಜಿಸಿ ಗೋಕಾಕ ಜಿಲ್ಲಾಯಾಗಿ ಘೋಷಿಸುವಂತೆ ಆಗ್ರಹಿಸಿ ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ  ಬೃಹತ್ ಪ್ರತಿಭಟನೆ ಜರುಗಿತು.

ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲೆ ವಿಭಜನೆ ಅನಿವಾರ್ಯ. ಜಾರಕಿಹೊಳಿ ಸಹೋದರರಿಗೆ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ನಾಗರಿಕರು ಶಕ್ತಿಯಾಗಿ ನಿಂತಿದ್ದಾರೆ. ಅಧಿವೇಶದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಮೇಲೆ ಒತ್ತಡ ತಂದು, ಬೇಡಿಕೆ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

 ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಅವರು ಮನವಿ ಸ್ವೀಕರಿಸುತ್ತಿರುವುದು.

ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಅವರು ಮನವಿ ಸ್ವೀಕರಿಸುತ್ತಿರುವುದು.

ಅರಭಾವಿಮಠದ ಗುರುಬಸವಲಿಂಗ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಮನ್ನಿಕೇರಿಯ ಮಹಾಂತಸಿದ್ದೇಶ್ವರ ಸ್ವಾಮೀಜಿ, ಕಳ್ಳಿಗುದ್ದಿ-ಕಪರಟ್ಟಿ ಬಸವರಾಜ ಸ್ವಾಮೀಜಿ,  ಸರ್ವೋತ್ತಮ ಜಾರಕಿಹೊಳಿ, ಮುಖಂಡ ಅಶೋಕ ಪೂಜಾರಿ, ಡಾ. ಮಹಾಂತೇಶ ಕಡಾಡಿ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ,  ಸಿದ್ದಲಿಂಗ ದಳವಾಯಿ, ರಾಜೇಂದ್ರ ಸಣ್ಣಕ್ಕಿ, ಅಶೋಕ ಪಾಟೀಲ, ಎಂ.ಆರ್.ಭೋವಿ, ಮಡ್ಡೆಪ್ಪ ತೋಳಿನವರ, ಟಿ.ಆರ್.ಕಾಗಲ, ಎಸ್.ವಿ.ದೇಮಶೆಟ್ಟಿ ಹಾಜರಿರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT