ಕೌಜಲಗಿ ಪ್ರತ್ಯೇಕ ತಾಲ್ಲೂಕಿಗಾಗಿ 1973ರಿಂದ ಹೋರಾಟ ನಡೆದಿದೆ. ಹುಂಡೇಕಾರ, ಗದ್ದಿಗೌಡರ, ವಾಸುದೇವ ಸಮಿತಿಗಳು 41 ಗ್ರಾಮ ಒಳಗೊಂಡು ಕೌಜಲಗಿಯನ್ನು ತಾಲ್ಲೂಕು ಕೇಂದ್ರ ರಚಿಸಬೇಕು ಎಂದು ಶಿಫಾರಸು ಮಾಡಿವೆ. ಇದಕ್ಕಾಗಿ ಜನರು ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೆ, ಬೇಡಿಕೆ ನನೆಗುದಿಗೆ ಬಿದ್ದಿದೆ.