ಶುಕ್ರವಾರ, ಮೇ 27, 2022
30 °C

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ರಾಜ್ಯದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ದೇವಾಂಗ ಸಮುದಾಯಕ್ಕೆ ಪ್ರತ್ಯೇಕ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಜವಳಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ನೀಲಕಂಠ ಮಾಸ್ತಮರಡಿ ಅವರ ನೇತೃತ್ವದಲ್ಲಿ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಸಮಾಜದಿಂದ ಸತ್ಕರಿಸುವ ಮೂಲಕ ಬೇಡಿಕೆ ಕುರಿತು ತಿಳಿಸಿದರು.

‘ಮುಂಬರುವ ಬಜೆಟ್‌ನಲ್ಲಿ ನೇಕಾರರ ಆರ್ಥಿಕ ಸ್ವಾವಲಂಬನೆಗಾಗಿ ಯೋಜನೆ ಘೋಷಿಸಬೇಕು. ಕೋವಿಡ್–19 ಸ‌ಂಕಷ್ಟದಿಂದ ತತ್ತರಿಸಿರುವ ನಮ್ಮ ಜೀವನ ಸುಧಾರಣೆಗಾಗಿ ಕೈಮಗ್ಗ ಜವಳಿ ಉದ್ಯಮಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು. ಹೆಚ್ಚಿನ ಯೋಜನೆಗಳಿಗೆ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು