ಗೋಕಾಕ: ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ನೂತನ ಗೋಕಾಕ ಜಿಲ್ಲಾ ಕೇಂದ್ರ ರಚನೆ ಮಾಡಲು ಆಗ್ರಹಿಸಲು ಮತ್ತು ಈ ಕುರಿತು ಮುಖ್ಯಮಂತ್ರಿಗಳಲ್ಲಿ ನಿವೇದಿಸಲು ನಿಯೋಗವನ್ನು ಒಯ್ಯುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಜುಲೈ 19ರಂದು ಬೆಳಿಗ್ಗೆ 10.30ಕ್ಕೆ ಮನವಿ ಸಲ್ಲಿಸಲಾಗುವುದು.

ಗೋಕಾಕ ಜಿಲ್ಲಾ ಚಾಲನಾ ಸಮಿತಿಯ ಅಧ್ಯಕ್ಷರಾಗಿರುವ ಶೂನ್ಯ ಸಂಪಾದನಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಗೋಕಾಕ ವಕೀಲರ ಸಂಘದ ಸಹಯೋಗದೊಂದಿಗೆ ಇಲ್ಲಿನ ಹಿಲ್ಗಾರ್ಡನದಲ್ಲಿರುವ ಸಚಿವರ ಸ್ವಗೃಹದ ಕಚೇರಿಯಲ್ಲಿ ಮನವಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಅದಕ್ಕೆ ಪೂರಕವಾಗಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವಿವಿಧ ಸಂಘ-ಸಂಸ್ಥೆ ಮತ್ತು ಸಂಘಟನೆಗಳು, ಜಿಲ್ಲಾ ಹೋರಾಟಗಾರರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷಾತೀತವಾಗಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರುಗಳು ಬೆಳಿಗ್ಗೆ 10ಕ್ಕೆ ಗೋಕಾಕ ಕೋರ್ಟ್ ಹತ್ತಿರದ ಶ್ರೀ ಬಸವೇಶ್ವರ ವೃತ್ತದಲ್ಲಿ ಸೇರಬೇಕೆಂದು ಹಾಗೂ ಸಚಿವರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಗೋಕಾಕ ಜಿಲ್ಲಾ ಚಾಲನಾ ಸಮಿತಿ ಪರವಾಗಿ ಹಿರಿಯ ರಾಜಕೀಯ ಧುರೀಣ ಅಶೋಕ ಪೂಜಾರಿ ಮತ್ತು ಗೋಕಾಕ ವಕೀಲರ ಸಂಘದ ಅಧ್ಯಕ್ಷ ಸುಭಾಸಗೌಡ ಪಾಟೀಲ ಜಂಟಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.