ಗೋಕಾಕ: ನೂತನ ಗೋಕಾಕ ಜಿಲ್ಲಾ ಕೇಂದ್ರ ರಚನೆ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ನಿಯೋಜಿತ ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಪದಾಧಿಕಾರಿಗಳನ್ನು ಭೇಟಿ ಮಾಡಿಸಲು ಕೂಡಲೇ ಸಮಯಾವಕಾಶ ಕಲ್ಪಿಸಿ ಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಇಲ್ಲಿನ ಹಿಲ್ ಗಾರ್ಡ್ನದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ನಿಯೋಜಿತ ನೂತನ ಗೋಕಾಕ ಜಿಲ್ಲಾ ಚಾಲನಾ ಸಮಿತಿ ಸದಸ್ಯರ ಪರವಾಗಿ ಸಮಿತಿ ಅಧ್ಯಕ್ಷರೂ ಆಗಿರುವ ಶೂನ್ಯ ಸಂಪಾದನಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ರಾಜಕೀಯ ಮುಖಂಡ ಅಶೋಕ ಪೂಜಾರಿ ಅವರು ಜಂಟಿಯಾಗಿ ಸಲ್ಲಿಸಿದ ಮನವಿ ಪತ್ರ ಸ್ವೀಕರಿಸಿ ಅವರು ಮಾತನಾಡಿದರು.

‘ಅತಿ ಶೀಘ್ರವೇ ಭೇಟಿಯ ಸಮಯ ನಿಗದಿಗೆ ಯತ್ನಿಸುತ್ತೇನೆ’ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಶೋಕ ಪೂಜಾರಿ ಅವರು, ಸಿಎಂ ಸಮಯ ನಿಗದಿಯೊಂದಿಗೆ ನೂತನ ಗೋಕಾಕ ಜಿಲ್ಲಾ ಕೇಂದ್ರ ರಚನೆ ಮಾಡುವುದರಲ್ಲೂ ನೀವು (ಸತೀಶ ಜಾರಕಿಹೊಳಿ) ಅಷ್ಟೇ ನಿರ್ಣಾಯಕ ಪಾತ್ರ ವಹಿಸಿಕೊಳ್ಳಬೇಕು ಎಂದು ನಿಯೋಗದ ಪರ ಒಕ್ಕೊರಲಿನ ಮನವಿ ಮಾಡಿಕೊಂಡರು.

ವಕೀಲರ ಸಂಘದ ಅಧ್ಯಕ್ಷ ಸುಭಾಷಚಂದ್ರ ಬಿರಾದರ ಪಾಟೀಲ, ಉಪಾಧ್ಯಕ್ಷರು ಮತ್ತು ಮಾಜಿ ಅಧ್ಯಕ್ಷ ಸಿ.ಡಿ.ಹುಕ್ಕೇರಿ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಕರವೇ ತಾಲ್ಲೂಕು ಘಟಕ ಅಧ್ಯಕ್ಷ ಬಸವರಾಜ ಖಾನಪ್ಪನವರ, ಗೋಕಾಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚೇರ್ಮನ್ ವಿಶ್ವನಾಥ ಕಡಕೋಳ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.