ಶುಕ್ರವಾರ, ಜುಲೈ 30, 2021
20 °C

ಬೆಳಗಾವಿ: ನೇಮಕಾತಿಗಾಗಿ ಪೌರ ಕಾರ್ಮಿಕರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಇರುವ ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಲ್ಲಿ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಉದ್ಯೋಗಾಕಾಂಕ್ಷಿಗಳು ಒತ್ತಾಯಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಅವರು, ‘ನೇಮಕಾತಿಗೆ ಸಂಬಂಧಿಸಿದಂತೆ ಎರಡು ವರ್ಷಗಳ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಇದುವರೆಗೆ ನೇಮಕಾತಿ ನಡೆದಿಲ್ಲ’ ಎಂದರು.

‘ತಡೆಯಾಜ್ಞೆ ತಂದಿರುವ ಸ್ಥಳೀಯ ಸಂಸ್ಥೆಗಳನ್ನು ಹೊರತುಪಡಿಸಿ ಇನ್ನುಳಿದ ಕಡೆಯಾದರೂ ನೇರ ನೇಮಕಾತಿ ಮಾಡಬೇಕು’ ಎಂದು ಆಗ್ರಹಿಸಿದರು.

ಸುಖದೇವ ಶಿಂಧೆ, ಅಮೂಲ ಮಾಳಿಗೆ, ಮಾರುತಿ ಕವಳಗೆ, ಸತೀಶ ಅಪ್ಪಣ್ಣವರ, ಪ್ರಕಾಶ ಸತ್ಯನಾಯ್ಕ, ಯಶವಂತ ಸಣ್ಣಕ್ಕಿ, ವಿಶ್ವನಾಥ ಜಾಧವ, ಇತರರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು