ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ: ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯ

Published 24 ಮೇ 2024, 16:01 IST
Last Updated 24 ಮೇ 2024, 16:01 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ಅಂಜನಾದ್ರಿ ಹನುಮ ಮಂದಿರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹100 ಕೋಟಿ ನೀಡುವ ಬದಲಾಗಿ ಅದೇ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡಬೇಕಿತ್ತು. ಅಲೆಮಾರಿ ಜನಾಂಗಕ್ಕೆ ಬಜೆಟ್‌ನಲ್ಲಿ ಒಂದು ರೂಪಾಯಿ ಅನುದಾನವನ್ನೂ ನೀಡಿಲ್ಲ’ ಎಂದು ಚಿತ್ರನಟ ಚೇತನ್ ಅಹಿಂಸಾ ಬೇಸರ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿಯಿಂದಾಗಿ ಜನರ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಿದ್ದರೂ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಲ್ಲ, ಸೋಮಾರಿ ಸಿದ್ಧರಾಮಯ್ಯ ಆಗಿದ್ದಾರೆ. ಸಿದ್ದರಾಮಯ್ಯ ಅವರು ಇತ್ತೀಚಿನ ದಿನಗಳಲ್ಲಿ ಅಹಿಂದ ಪರವಾಗಿ ಕೆಲಸ ಮಾಡುತ್ತಿಲ್ಲ’ ಎಂದು ದೂರಿದರು.

‘ಚಿಕ್ಕೋಡಿ ಪಟ್ಟಣದ ರಾಮ ನಗರದ ಅಲೆಮಾರಿ ಜನಾಂಗದ 80ಕ್ಕೂ ಹೆಚ್ಚು ಕುಟುಂಬಗಳು ಜೋಪಡಿಯಲ್ಲಿ ಬದುಕು ನಡೆಸುತ್ತಿವೆ. ಅವರಿಗೆ ಸೂರು ಕಲ್ಪಿಸಿಕೊಡಬೇಕು. ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ ಏನು ಮಾಡುತ್ತಿದ್ದಾರೆ?  ಕಳೆದ ಏಳೆಂಟು ದಶಕಗಳಿಂದ ವಾಸವಾಗಿರುವ ಅಲೆಮಾರಿ ಜನರ ಕಷ್ಟಕ್ಕೆ ಸ್ಪಂದಿಸುವ ವ್ಯವಧಾನ ಶಾಸಕರಿಗೆ ಇಲ್ಲವೇ? ಕೂಡಲೇ ಸರ್ಕಾರದಿಂದ ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಚಿಕ್ಕೋಡಿ ಅಲೆಮಾರಿ ಜನರೊಂದಿಗೆ ಸೇರಿ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಮುಖಂಡ ಮಚ್ಚೇಂದ್ರ ಕಾಡಾಪೂರೆ, ಸಿದ್ದು ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT