ಐತಿಹಾಸಿಕ ಹಿನ್ನೆಲೆ ಇರುವ ಗಡಾದ ಮರಡಿ ಮೇಲಿರುವ ಕಾವಲು ಗೋಪುರ ಕಳಚಿ ಬಿದ್ದು ಕೆಲ ತಿಂಗಳಾಗಿದೆ. ಪ್ರಾಧಿಕಾರ ಅದನ್ನು ಪುನರ್ ನಿರ್ಮಿಸಬೇಕು. ಈ ಬಗ್ಗೆ ಅಲಕ್ಷ್ಯ ಮಾಡುವುದು ಸರಿಯಲ್ಲ
ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಪೀಠಾಧಿಕಾರಿ ರಾಜಗುರು ಸಂಸ್ಥಾನ ಕಲ್ಮಠ
ಕುಸಿದಿರುವ ಐತಿಹಾಸಿಕ ಗಡಾದ ಮರಡಿ ಮೇಲಿರುವ ಗೋಪುರ ದುರಸ್ತಿ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪ್ರಾಧಿಕಾರದ ಅಧ್ಯಕ್ಷ ಸಚಿವ ಕೃಷ್ಣಬೈರೇಗೌಡ ಅವರಿಗೂ ತೋರಿಸಲಾಗಿದೆ. ದುರಸ್ತಿಗೆ ಸರ್ಕಾರದಿಂದ ಅನುದಾನ ಸಿಕ್ಕ ಕೂಡಲೇ ಕಾಮಗಾರಿ ಆರಂಭಿಸಲಾಗುವುದು
ಬಾಬಾಸಾಹೇಬ ಪಾಟೀಲ ಶಾಸಕ ಚನ್ನಮ್ಮನ ಕಿತ್ತೂರು
ಐತಿಹಾಸಿಕ ಗಡಾದ ಮರಡಿ ಪ್ರದೇಶದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ಪ್ರಾಧಿಕಾರಕ್ಕೆ ಹಸ್ತಾಂತರವೂ ಆಗಿಲ್ಲ. ಕೆಲಸದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಲೋಕೋಪಯೋಗಿ ಇಲಾಖೆಯ ಎಇಇ ಅವರಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ
ಪ್ರಭಾವತಿ ಫಕೀರಪುರ ಆಯುಕ್ತೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ