25 ತಿಂಗಳ ವೇತನ ಬಿಡುಗಡೆಗೆ ಆಗ್ರಹ

7

25 ತಿಂಗಳ ವೇತನ ಬಿಡುಗಡೆಗೆ ಆಗ್ರಹ

Published:
Updated:
Deccan Herald

ಬೆಳಗಾವಿ: ಕಲಬುರಗಿ ಜಿಲ್ಲೆಯ ಅಫ್ಜಲ‍ಪುರ ಪುರಸಭೆಯ ಕ್ಷೇಮಾಭಿವೃದ್ಧಿ, ದಿನಗೂಲಿ ಹಾಗೂ ಕೈ ರಸೀದಿ ಸಿಬ್ಬಂದಿಯ 25 ತಿಂಗಳ ವೇತನ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಪೌರ ನೌಕರರ ಸೇವಾ ಸಂಘದವರು ಬುಧವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿ ಸುವರ್ಣ ಗಾರ್ಡನ್‌ನಲ್ಲಿ ಧರಣಿ ನಡೆಸಿದರು.

‘ಈ ಪುರಸಭೆಯಲ್ಲಿ 91 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುರಸಭೆಯಲ್ಲಿ ಅನುದಾನ ಲಭ್ಯವಿಲ್ಲದ ಕಾರಣ ವೇತನ ಪಾವತಿಯಾಗಿಲ್ಲ. ಇದರಿಂದ ನೌಕರರು ಹಾಗೂ ಅವರ ಕುಟುಂಬದವರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಅಧಿಕಾರಿಗಳು ಹಲವು ಬಾರಿ ಪತ್ರ ವ್ಯವಹಾರ ನಡೆಸಿದ್ದಾರೆ. ಆದರೆ, ಸಿಬ್ಬಂದಿಗೆ ವೇತನ ಸಿಕ್ಕಿಲ್ಲ’ ಎಂದು ತಿಳಿಸಿದರು.

‘ಸರ್ಕಾರ ಇತ್ತ ಗಮನಹರಿಸಬೇಕು. ಅಲ್ಲಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಅದರಲ್ಲಿ ಬಾಕಿ ವೇತನ ಬಿಡುಗಡೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಸಂಘದ ಅಫ್ಜಲಪುರ ಶಾಖೆ ಅಧ್ಯಕ್ಷ ಸಂತೋಷ ಎಸ್. ಛಲವಾದಿ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !