ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನಾನುದಾನಕ್ಕೆ ಒಳಪಡಿಸಲು ಒತ್ತಾಯ

Last Updated 17 ಡಿಸೆಂಬರ್ 2018, 12:11 IST
ಅಕ್ಷರ ಗಾತ್ರ

ಬೆಳಗಾವಿ: ಅನುದಾನಿತ ಪ್ರೌಢಶಾಲೆಗಳಲ್ಲಿ ಬಹಳ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ‘ಡಿ’ ಗ್ರೂಪ್ ನೌಕರರನ್ನು ವೇತನಾನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಪ್ರೌಢಶಾಲೆಗಳ ‘ಡಿ’ ಗ್ರೂಪ್ ನೌಕರರ ಸಂಘದವರು ಸೋಮವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟನೆ ನಡೆಸಿದರು.

‘ಹೋರಾಟದ ಫಲವಾಗಿ, ಸರ್ಕಾರವು 2014ರಲ್ಲಿ 1500 ಹುದ್ದೆಗಳನ್ನು ವೇತನ ಅನುದಾನಕ್ಕೆ ಒಳಪಡಿಸಿದೆ. ಉಳಿದ 350 ಹುದ್ದೆಗಳು ಅನುದಾನಕ್ಕೆ ಒಳಪಟ್ಟಿಲ್ಲ. 2000ನೇ ಸಾಲಿನ ಪೂರ್ವದಲ್ಲಿ ನೇಮಕವಾದ ಎಲ್ಲ ಡಿ ಗ್ರೂಪ್ ನೌಕರರನ್ನು ಅನುದಾನಕ್ಕೆ ಒಳಪಡಿಸಬೇಕು. ಅಕಾಲಿನ ಮರಣ ಹೊಂದಿದವರು ಹಾಗೂ ನಿವೃತ್ತಿ ಹೊಂದಿದವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು’ ಎಂದು ಒತ್ತಾಯಿಸಿದರು.

ಅಧ್ಯಕ್ಷ ಮೋಹನ ಬಾಬು, ಗೌರವಾಧ್ಯಕ್ಷ ಗೋಪಿನಾಥ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಹನುಮಂತಪ್ಪ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT