ಅಂಗವಿಕಲರಿಗೆ ವಿಶೇಷ ಪ್ಯಾಕೇಜ್: ಮನವಿ

ಬೆಳಗಾವಿ: ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಅಂಗವಿಕಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ರಾಜ್ಯ ಅಂಗವಿಕಲರ ಒಕ್ಕೂಟದವರು ಇಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
‘ಲಾಕ್ಡೌನ್ನಿಂದಾಗಿ ಕೆಲಸ ಇಲ್ಲದಂತಾಗಿದೆ. ಸ್ವಯಂ ಉದ್ಯೋಗ ಮಾಡುವವರಿಗೂ ತೊಂದರೆಯಾಗಿದೆ. ಹೀಗಾಗಿ, ದಿನಸಿ, ಆಹಾರ, ಮನೆ ಬಾಡಿಗೆ, ವಿದ್ಯುತ್ ಬಿಲ್ ಹಾಗೂ ವೈದ್ಯಕೀಯ ವೆಚ್ಚಕ್ಕೆ ಹಣ ಇಲ್ಲದಂತಾಗಿದೆ. ಪರಿಣಾಮ ಜೀವನ ದುಸ್ತರವಾಗಿದೆ. ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಂಗವಿಕಲರಿಗೆ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
ಒಕ್ಕೂಟದ ಅಧ್ಯಕ್ಷ ಮಹಾಂತೇಶ ಹೊಂಗಲ್, ಸೂರಜ್ ಧಾಮನೇಕರ ನೇತೃತ್ವ ವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.